ಪ್ರಸ್ತುತ ಸಮಾಜದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೆ ಯುವಕರು ಸಕ್ರಿಯವಾಗಿ ಸ್ಪಂದಿಸುವ ಅಗತ್ಯವಿದೆ. ಸಾರ್ವಜನಿಕ ಸಮಸ್ಯೆಗಳನ್ನು ಗುರುತಿಸಿ ಅವುಗಳ ಪರಿಹಾರಕ್ಕಾಗಿ ಪ್ರಶ್ನಿಸುವ ಯುವಕರು ಸಮಾಜಕ್ಕೆ ಬೇಕು.
ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮತ್ತು ಸಂಬಂಧಿತ ಗುಂಪುಗಳ ಗಮನಕ್ಕೆ ಜನರ ಸಮಸ್ಯೆಗಳನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.