ಶಾರುಖ್ ಖಾನ್ ಅಭಿನಯದ ‘ಕಿಂಗ್’ ಸಿನಿಮಾಗೆ ಸಂಬಂಧಿಸಿದ ಮತ್ತೊಂದು ಕುತೂಹಲಕಾರಿ ಮಾಹಿತಿ ಅಭಿಮಾನಿಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಚಿತ್ರದಲ್ಲಿ ಕರೀನಾ ಕಪೂರ್ ವಿಶೇಷ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಈಕೆಗಾಗಿಯೇ ಸ್ಪೆಷಲ್ ಆಗಿ ಹಾಡೊಂದನ್ನು ಮಾಡಲಾಗುತ್ತಿದೆ ಎಂಬ ಮಾತು ಚಿತ್ರರಂಗದಲ್ಲಿ ಹರಿದಾಡುತ್ತಿದೆ. ವರದಿಯ ಪ್ರಕಾರ, ಈ ಹಾಡನ್ನು ಅದ್ಧೂರಿ ಸೆಟ್‌ಗಳು ಮತ್ತು ಭವ್ಯವಾದ ದೃಶ್ಯಗಳೊಂದಿಗೆ ಚಿತ್ರೀಕರಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ.