ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಮಹತ್ವದ ಬೆಳವಣಿಗೆ ನಡೆದಿದೆ. ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಜತೆಗಿನ ಸಭೆಯ ಬಳಿಕ ರಾಜ್ಯ ಸಚಿವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಕೇಂದ್ರ ತಾಂತ್ರಿಕ ತಂಡ ಸೆ.7ರಂದು ಜಿಲ್ಲೆಗೆ ಭೇಟಿ ನೀಡಿ ಈ ಹಿಂದೆ ಪರಿಶೀಲಿಸಿದ ಪ್ರದೇಶಗಳ ಬದಲಿಗೆ ಹೊಸ ಪರ್ಯಾಯ ಪ್ರದೇಶಗಳ ಪರಿಶೀಲನೆ ನಡೆಸಲಿದೆ. ವರದಿಯು ಭೌಗೋಳಿಕ ಪರಿಸ್ಥಿತಿಗಳು, ಹವಾಮಾನ ಮತ್ತು ತಾಂತ್ರಿಕ ಅಂಶಗಳನ್ನು ಪರಿಶೀಲಿಸುತ್ತದೆ. ಆ ವರದಿ ಆಧರಿಸಿ ಕೇಂದ್ರ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.