ಶಿಕ್ಷಕರ ದಿನಾಚರಣೆ ನಿಮಿತ್ತ ಭಾಗ್ಯರತಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹಾಗೂ ಉನ್ನತ ಶಿಕ್ಷಣದ ಭವಿಷ್ಯ ಕಾಪಾಡಲು ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕಪ್ಪು ಬ್ಯಾಡ್ಜ್ ಧರಿಸಿ ಪ್ರತಿಭಟನೆ ನಡೆಸಿದರು.

ಕಾಲೇಜು ನಿರ್ದೇಶಕ ನಲ್ಲ ಜೈ ಶಂಕರಗೌಡ ಮಾತನಾಡಿ, ‘ಸಕಾಲಕ್ಕೆ ಶುಲ್ಕ ಮರುಪಾವತಿ ಹಣ ಬಿಡುಗಡೆ ಮಾಡದ ಕಾರಣ ವಿದ್ಯಾರ್ಥಿಗಳು ಹಾಗೂ ಕಾಲೇಜುಗಳ ಮಾಲಕರು ಹಾಗೂ ಸಿಬ್ಬಂದಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು’ ಎಂದರು.

ಕಾಲೇಜು ಪ್ರಾಂಶುಪಾಲ ನವೀನ್ ರಾಜ್ ಮಾತನಾಡಿ, ''ಸರಕಾರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಶುಲ್ಕ ಮರುಪಾವತಿ ಹಣವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು.ಸರಕಾರ ವಿದ್ಯಾರ್ಥಿಗಳ ಹಾಗೂ ಕಾಲೇಜುಗಳ ಸಮಸ್ಯೆಗಳನ್ನು ಸಕಾರಾತ್ಮಕವಾಗಿ ಗಮನಿಸಿ ಕೂಡಲೇ ಪರಿಹಾರ ನೀಡಬೇಕು' ಎಂದು ಮನವಿ ಮಾಡಿದರು.

ಶಿಕ್ಷಕರ ದಿನಾಚರಣೆಯಂದು ಕಪ್ಪು ಬ್ಯಾಡ್ಜ್ ಧರಿಸಿ ಪ್ರತಿಭಟನೆ ನಡೆಸುವ ಮೂಲಕ ಸರಕಾರದ ಗಮನ ಸೆಳೆಯುವುದು ನಮ್ಮ ಉದ್ದೇಶ ಎಂದು ಕಾಲೇಜು ಪ್ರತಿನಿಧಿಗಳು ತಿಳಿಸಿದರು. ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಇದೊಂದು ಶಾಂತಿಯುತ ಪ್ರತಿಭಟನೆಯಾಗಿದೆ ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗ್ಯರತಿ ಪದವಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಇತರರು ಭಾಗವಹಿಸಿದ್ದರು.