ಅಮರಾವತಿ: ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಆಂಧ್ರಪ್ರದೇಶದ ನಿರುದ್ಯೋಗಿ ಯುವಕರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಆಂಧ್ರಪ್ರದೇಶ ಲೋಕಸೇವಾ ಆಯೋಗವು ಗ್ರೂಪ್-2 ವರ್ಗದಲ್ಲಿ ಒಟ್ಟು 720 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ಹುದ್ದೆಗಳಲ್ಲಿ 471 ಎಕ್ಸಿಕ್ಯೂಟಿವ್ ಮತ್ತು 249 ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳು ಸೇರಿವೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಧಿಸೂಚನೆಯಲ್ಲಿ ನಮೂದಿಸಿರುವ ವಿದ್ಯಾರ್ಹತೆ, ಪರೀಕ್ಷಾ ವಿಧಾನ ಮತ್ತು ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಪರಿಶೀಲಿಸಿದ ನಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.