ನವದೆಹಲಿ:
ಕಳೆದ ಸೆಪ್ಟೆಂಬರ್‌ನಲ್ಲಿ ತಮಿಳುನಾಡಿನ ಕರೂರ್‌ನಲ್ಲಿ ನಡೆದ ರ್ಯಾಲಿ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರ ಉದ್ಯೋಗ ನೀಡುವುದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜೆಬಿ ಪಾರ್ಥಿವಾಲಾ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಮದ್ರಾಸ್ ಹೈಕೋರ್ಟ್ ಈ ಹಿಂದೆ ನೀಡಿದ್ದ ರದ್ದತಿ ಆದೇಶಕ್ಕೆ ತಡೆ ನೀಡಿದೆ.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಪೀಠ, ‘‘ದುರದೃಷ್ಟಕರ ಘಟನೆಯಲ್ಲಿ ಜೀವ ಕಳೆದುಕೊಂಡಾಗ, ಕುಟುಂಬದ ಒಬ್ಬನೇ ಆದಾಯ ಹೊಂದಿರುವ ವ್ಯಕ್ತಿ ಮೃತಪಟ್ಟರೆ, ಅವರ ವಿದ್ಯಾರ್ಹತೆಯ ಆಧಾರದ ಮೇಲೆ ಉದ್ಯೋಗ ನೀಡುವ ಸರಕಾರದ ಆಶಯವನ್ನು ಯಾರೂ ಪ್ರಶ್ನಿಸುವಂತಿಲ್ಲ, ಇದು ಸರಕಾರದ ನೀತಿ ನಿರ್ಧಾರ.ಸಂವಿಧಾನದ 162ನೇ ಪರಿಚ್ಛೇದದ ಅಡಿಯಲ್ಲಿ ವಿಪತ್ತು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಹಕ್ಕು ಸರಕಾರಕ್ಕಿದೆ ಎಂದು ವಿವರಿಸಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.