ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಅಂತಾರಾಷ್ಟ್ರೀಯ ಟಿ20 ಸರಣಿಗೆ ಭಾರತೀಯ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದೆ. ಗಾಯದ ಸಮಸ್ಯೆಯಿಂದ ಕಳೆದ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸಂಪೂರ್ಣ ಫಿಟ್ನೆಸ್ ಪಡೆದು ತಂಡಕ್ಕೆ ಮರಳಿದ್ದಾರೆ.
ಆಂಧ್ರಪ್ರದೇಶದ ಯುವ ಸಂಚಲನ ನಿತೀಶ್ ಕುಮಾರ್ ರೆಡ್ಡಿ ಅವರಿಗೂ ಆಯ್ಕೆದಾರರು ಮತ್ತೊಂದು ಅವಕಾಶ ನೀಡಿದ್ದಾರೆ. ಈ ಇಬ್ಬರು ಆಲ್‌ರೌಂಡರ್‌ಗಳ ಆಗಮನದಿಂದ ತಂಡದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಸಮತೋಲನ ಬಲಗೊಂಡಿದೆ ಎಂದು ಕ್ರೀಡಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.