ಕನ್ನಡದ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ 'ಟಾಕ್ಸಿಕ್' ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಮೂಡಿ ಬಂದಿದೆ. ಈ ಸಿನಿಮಾದ ರನ್ ಟೈಮ್ ಬಗ್ಗೆ ಸಿನಿಮಾ ವಲಯದಲ್ಲಿ ಕುತೂಹಲಕಾರಿ ಪ್ರಚಾರ ನಡೆಯುತ್ತಿದೆ. ಇತ್ತೀಚಿನ ಮಾಹಿತಿ ಪ್ರಕಾರ ಈ ಸಿನಿಮಾದ ಅವಧಿ ಸುಮಾರು 3 ಗಂಟೆ 11 ನಿಮಿಷ ಇರಲಿದೆಯಂತೆ. ಈ ಸಿನಿಮಾದಲ್ಲಿ ಅದ್ಧೂರಿ ಆಕ್ಷನ್ ಸೀಕ್ವೆನ್ಸ್‌ಗಳು ಮತ್ತು ದೃಶ್ಯಗಳು ಅದ್ಭುತವಾಗಿರಲಿವೆ ಎಂದು ವರದಿಯಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್‌ನಡಿಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ ಮತ್ತು ತಾರಾ ಸುತಾರಿಯಾ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ.