ಹೈದರಾಬಾದ್:
ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿ ಗೀತು ಮೋಹನ್ ದಾಸ್ ನಿರ್ದೇಶನದ ಬಿಗ್ ಬಜೆಟ್ ಚಿತ್ರ 'ಟಾಕ್ಸಿಕ್'. ಈ ಚಿತ್ರದಲ್ಲಿ ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರತಂಡ, ಕಿಯಾರಾ ಚಿತ್ರದಲ್ಲಿನ ಪಾತ್ರಕ್ಕಾಗಿ ಶ್ರಮಿಸಿದ್ದಾರೆ ಮತ್ತು ಚಿತ್ರೀಕರಣದ ಸಮಯದಲ್ಲಿ ಅವರ ಶ್ರದ್ಧೆ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಮೊದಮೊದಲು ಈ ಪಾತ್ರವನ್ನು ಆಯ್ಕೆ ಮಾಡಿಕೊಳ್ಳಲು ಸ್ವಲ್ಪ ಹಿಂದೇಟು ಹಾಕಿದರೂ ಪಾತ್ರದ ಆಳ, ಭಾವದ ತೀವ್ರತೆಯನ್ನು ಅರ್ಥಮಾಡಿಕೊಂಡು ಪೂರ್ಣ ನ್ಯಾಯ ಒದಗಿಸಿದ್ದಾರೆ ಎಂದು ಚಿತ್ರತಂಡ ಹೇಳಿದೆ. ಈ ಪಾತ್ರವು ಕಿಯಾರಾ ಅವರ ವೃತ್ತಿಜೀವನದಲ್ಲಿ ನಿಲ್ಲುವುದಲ್ಲದೆ ಪ್ರೇಕ್ಷಕರನ್ನು ಮೆಚ್ಚಿಸುತ್ತದೆ ಎಂಬ ವಿಶ್ವಾಸವನ್ನು ಚಿತ್ರತಂಡ ವ್ಯಕ್ತಪಡಿಸಿದೆ.