ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಪ್ರಾಂತ್ಯಗಳ ಪುನರ್ವ್ಯವಸ್ಥೀಕರಣದ ಪ್ರಸ್ತಾವನೆಯನ್ನು ತೀವ್ರವಾಗಿ ವಿರೋಧಿಸಲಾಗಿದೆ. ಸಿಂಧ್ ಪ್ರಾಂತ್ಯವನ್ನು ವಿಭಜಿಸುವ ಪ್ರಯತ್ನಗಳನ್ನು ವಿರೋಧಿಸಿ ಕರಾಚಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸಲಾಯಿತು.

ಈ ಪ್ರತಿಭಟನೆಯಲ್ಲಿ ವಕೀಲರು, ನಾಗರಿಕ ಹಕ್ಕುಗಳ ಕಾರ್ಯಕರ್ತರು ಮತ್ತು ಸಾಮಾನ್ಯ ಜನರು ಭಾಗವಹಿಸಿದ್ದರು. ಸಿಂಧ್‌ನ ಐತಿಹಾಸಿಕ ಮತ್ತು ಸಾಂಸ್ಕೃತಿಕ ಗುರುತನ್ನು ಹಾಳುಮಾಡುವ ನಿರ್ಧಾರಗಳನ್ನು ತಡೆಯುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.