ನವದೆಹಲಿ: ವೈದ್ಯಕೀಯ ಕ್ಷೇತ್ರದಲ್ಲಿ ಅಪರೂಪದ ಸಾಧನೆ ದಾಖಲಾಗಿದೆ. ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ವೈದ್ಯರು ಗರ್ಭದಲ್ಲಿರುವ ಶಿಶುವಿನ ಬೆನ್ನುಮೂಳೆಯ ದೋಷವನ್ನು ಸರಿಪಡಿಸಲು ಓಪನ್ ಫೀಟಲ್ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
ಸಾಮಾನ್ಯವಾಗಿ ಮಗು ಜನಿಸಿದ ನಂತರ ಪತ್ತೆಯಾಗುವ ಬೆನ್ನುಮೂಳೆಯ ದೋಷವನ್ನು ಗರ್ಭಾವಸ್ಥೆಯಲ್ಲಿಯೇ ಪತ್ತೆಹಚ್ಚಿ ಚಿಕಿತ್ಸೆ ನೀಡುವುದು ಈ ಶಸ್ತ್ರಚಿಕಿತ್ಸೆಯ ವಿಶೇಷತೆಯಾಗಿದೆ. ಈ ಪ್ರಕ್ರಿಯೆಯಲ್ಲಿ ವೈದ್ಯರು, ದಾದಿಯರು ಸೇರಿದಂತೆ ವಿವಿಧ ವಿಭಾಗಗಳ ತಜ್ಞರು ಭಾಗವಹಿಸಿದ್ದರು ಎಂದು ಪತ್ರಿಕೆ ವರದಿ ಮಾಡಿದೆ.ಈ ಚಿಕಿತ್ಸೆಯ ಮುಖ್ಯ ಉದ್ದೇಶವೆಂದರೆ ಭವಿಷ್ಯದಲ್ಲಿ ಮಗುವಿಗೆ ಉಂಟಾಗಬಹುದಾದ ನರ ಸಂಬಂಧಿತ ಸಮಸ್ಯೆಗಳನ್ನು ಕಡಿಮೆ ಮಾಡುವುದು.






