ಕುಕಟ್‌ಪಲ್ಲಿ ಜೆಎನ್‌ಟಿಯು ಹಾಸ್ಟೆಲ್‌ನಲ್ಲಿ ತೀಜ್ ಕಾರ್ಯಕ್ರಮದ ವೇಳೆ ಗೌತಮಿ ಮತ್ತು ಮಂಜೀರ ಹಾಸ್ಟೆಲ್ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ವಿದ್ಯಾರ್ಥಿಗಳು ಪರಸ್ಪರ ಲಾಠಿ ಪ್ರಹಾರ ನಡೆಸಿದ್ದಾರೆ. ಎರಡು ಗುಂಪುಗಳ ನಡುವಿನ ಘರ್ಷಣೆ ವಿಶ್ವವಿದ್ಯಾಲಯದ ಆವರಣದಲ್ಲಿ ಆತಂಕವನ್ನು ಸೃಷ್ಟಿಸಿತು.
ತಕ್ಷಣ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ವಿದ್ಯಾರ್ಥಿಗಳನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಕೆಪಿಎಚ್‌ಬಿ ಪೊಲೀಸರು ತಿಳಿಸಿದ್ದಾರೆ. ಇದೀಗ ಪರಿಸ್ಥಿತಿ ಶಾಂತವಾಗಿದ್ದರೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ಮುಂದುವರಿದಿದೆ ಎಂದು ವರದಿಯಾಗಿದೆ.






